Mysore
27
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯ ಬೆನ್ನಲ್ಲೇ ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ದರ ಲೀಟರ್‌ಗೆ 7 ರಿಂದ 11 ರೂಪಾಯಿವರೆಗೆ ಹೆಚ್ಚಳವಾಗಿದೆ.

ಮಾರ್ಚ್ ಮೊದಲ ವಾರಕ್ಕೆ ಹೋಲಿಸಿದರೆ ಸನ್‌ಫ್ಲವರ್‌ ಆಯಿಲ್‌ ಮತ್ತು ಇತರ ಬ್ರ್ಯಾಂಡ್‌ಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಮಾರ್ಚ್.‌4ರಂದು 167 ರೂ ಇದ್ದ ಸನಫ್ಲವರ್‌ ಆಯಿಲ್‌ ಬೆಲೆ ಮಾರ್ಚ್.‌12ರ ವೇಳೆಗೆ 172 ರೂಗೆ ಏರಿದೆ.

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ಯುದ್ಧಕ್ಕೆ ಮುಂದಾದ ಬೆನ್ನಲ್ಲೇ ಕಚ್ಚಾ ತೈಲ ಮತ್ತು ಅಡುಗೆ ಎಣ್ಣೆಯ ಆಮದಿನ ಮೇಲೆ ಪರಿಣಾಮ ಬೀರಿದ್ದು, ದರ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

Tags:
error: Content is protected !!