Mysore
24
broken clouds

Social Media

ಶನಿವಾರ, 27 ಜೂನ್ 2026
Light
Dark

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

Siddaramaiah considers enacting a law to control fake news

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ.

ಮಾರ್ಚ್.‌16ರಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಡಿನ್ನರ್‌ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಈ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಮತ್ತೆ ಸುದ್ದಿಯಲ್ಲಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

Tags:
error: Content is protected !!