Mysore
32
few clouds

Social Media

ಶನಿವಾರ, 14 ಮಾರ್ಚ್ 2026
Light
Dark

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ ಜೈರಾಜ್‌ ಅವರು, ಅಲ್ಲಿನ ಪ್ರಸಿದ್ಧ ಚನ್ನಬಸವೇಶ್ವರ ಚಿತ್ರಮಂದಿರದ ಮಾಲೀಕರಾಗಿದ್ದರು.

2019ರಲ್ಲಿ ಪ್ರದರ್ಶಕರ ವಲಯದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಹಲವಾರು ಚಿತ್ರಗಳ ವಿತರಣೆ ಹಾಗೂ ಪ್ರದರ್ಶನದಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇಂದು ಮಧ್ಯಾಹ್ನದ ನಂತರ ಅವರ ಹುಟ್ಟೂರಾದ ಗುಬ್ಬಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Tags:
error: Content is protected !!