Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ (ರಿ)ಬೆಂಗಳೂರು ಕಂದಾಯ ನೌಕರರ ಸಂಘದ ಭವನ ಕಟ್ಟಡ ಹಾಗೂ ಜಿಲ್ಲಾ ಕಂದಾಯ ಇಲಾಖೆ ನೌಕರರ ಮತ್ತು ನಿವೃತ್ತ ನೌಕರರ ಗೃಹ ನಿರ್ಮಾಣ ಕಚೇರಿನ್ನು ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಂದಾಯ ನೌಕರರ ಸಂಘದ ನಿವೃತ್ತ ನೌಕರರ ಗೃಹ ನಿರ್ಮಾಣ ಕಟ್ಟಡ ಬೃಹತ್ ಕಟ್ಟಡವಾಗಿ ನಿರ್ಮಾಣವಾಗಿದ್ದು, ಕಂದಾಯ ಇಲಾಖೆ ನೌಕರರ ಸಮಸ್ಯೆಯನ್ನು ಬಗೆಹರಿಸಲು ಬೃಹತ್ ಕಟ್ಟಡ ನಿರ್ಮಾಣ ಆಗಿದ್ದು ನೌಕರರು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿರವರು ದಿವ್ಯ ಸಾನಿಧ್ಯ ವಹಿಸಿದ್ದರು.

ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಕರ್ನಾಟಕ ರಾಜ್ಯ ಸಹಕಾರಿ ಕಂದಾಯ ಇಲಾಖೆ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಡಿ. ತಮ್ಮಣ್ಣ ಗೌಡ ಉಪಸ್ಥಿತರಿದ್ದರು.

 

 

Tags:
error: Content is protected !!