Mysore
25
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ ಸಮಸ್ಯೆ ಆಗಿದೆ. ಸಚಿವ ಮುನಿಯಪ್ಪ ಸರಿಯಾಗಿ ಮಾತನಾಡುತ್ತಾರೆ. ಸಿದ್ದರಾಮಯ್ಯ ಬೇರೆ ಕಡೆ ಹೋಗಿಲ್ಲ. ಇಲ್ಲಿ ಮಾತ್ರ ಇದ್ದಾರೆ. ಆದ ಕಾರಣ ಅವರಿಗೆ ಇದರ ಬಗ್ಗೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಗ್ಯಾಸ್‌ ಅಭಾವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ರಾಜ್ಯ ಸರ್ಕಾರ ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಗ್ಯಾಸ್‌ ತಡೆಯಬೇಕು. ಕೇಂದ್ರ ಸರ್ಕಾರ ಈಗಾಗಲೇ ಎಸ್ಮಾ ಜಾರಿ ಮಾಡಿದೆ. ಅಕ್ರಮ ಮಾರಾಟದ ವಿರುದ್ಧ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

 

 

Tags:
error: Content is protected !!