Mysore
27
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Rain Fury Continues in Kodagu

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಳ್ಲಿ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ.

ತಾಪಮಾನ ಮತ್ತಷ್ಟು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 11ರಿಂದ 4 ಗಂಟೆಯವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

 

Tags:
error: Content is protected !!