Mysore
23
overcast clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ ಬಿಕೋ ಎನ್ನುತ್ತಿವೆ.

ಅರಬ್‌ ದೇಶಗಳ ಪೈಕಿ ಅತ್ಯಂತ ಸುರಕ್ಷಿತ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದುಬೈ ಮೇಲೆ ಇತ್ತೀಚೆಗೆ ನಡೆದ ಡ್ರೋನ್‌ ಮತ್ತು ಕ್ಷಿಪಣಿ ದಾಳಿಗಳು ಪ್ರವಾಸಿಗರಲ್ಲಿ ಭಾರೀ ಆತಂಕ ಮೂಡಿಸಿವೆ.

ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್‌ ಸೇರಿದಂತೆ ಹಲವು ದೇಶಗಳ ವಿದೇಶಾಂಗ ಇಲಾಖೆಗಳು ತಮ್ಮ ನಾಗರಿಕರಿಗೆ ಎಚ್ಚರಿಕೆ ನೀಡಿವೆ.

ದುಬೈನ್‌ ಆರ್ಥಿಕತೆಯ ಬೆನ್ನೆಲುಬಾಗಿರುವ ಪ್ರವಾಸೋದ್ಯಮವು ಈ ಪ್ರಾದೇಶಿಕ ಅಸ್ಥಿರತೆಯಿಂದಾಗಿ ಭಾರೀ ಹೊಡೆದ ಅನುಭವಿಸುತ್ತಿದೆ.

 

Tags:
error: Content is protected !!