Mysore
24
overcast clouds

Social Media

ಮಂಗಳವಾರ, 19 ಮೇ 2026
Light
Dark

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು ಹಾಜರಾಗಿದ್ದರು.

ದೆಹಲಿಯಲ್ಲಿರುವ ಸಿಬಿಐ ಕಚೇರಿಗೆ ಆಗಮಿಸಿದ ಅವರು, ಅಧಿಕಾರಿಗಳು ಕೇಳಿದ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.

ಕರೂರಿನಲ್ಲಿ ಏರ್ಪಡಿಸಿದ್ದ ಟಿವಿಕೆ ಪಕ್ಷದ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ 41 ಜನರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ದಳಪತಿ ವಿಜಯ್‌ ವಿಚಾರಣೆ ನಡೆದಿದೆ.

Tags:
error: Content is protected !!