Mysore
32
scattered clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ.

ಮೈಸೂರು ಜಿಲ್ಲೆ ಟಿ.ನರಸೀಪುರದ ತ್ರಿವೇಣಿ ಸಂಗಮಕ್ಕೆ ಭಕ್ತರ ಸಂಖ್ಯೆಯೇ ಹರಿದುಬಂದಿದ್ದು, ಗುಂಜಾ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಸಾವಿರಾರು ಜನರು ತ್ರಿವೇಣಿ ಸಂಗಮಕ್ಕೆ ಆಗಮಿಸಿದ್ದು, ಪುಣ್ಯಸ್ನಾನ ಮಾಡಿ ಹರಕೆ ತೀರಿಸುತ್ತಿದ್ದಾರೆ.

ಯುಗಾದಿ ಹಬ್ಬದ ವಿಶೇಷವಾಗಿ ಇಂದು ಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿದೆ.

ಭಕ್ತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

 

Tags:
error: Content is protected !!