Mysore
23
broken clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆಂಚಿಟ್ಟಿಯಲ್ಲಿ ನಡೆದಿದೆ.

ಸುಂಟಿಕೊಪ್ಪದಿಂದ ಮಾದಾಪುರ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಕೆಂಚಟಿಯಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಇದರಿಂದ ತೀವ್ರ ಗಾಯಗೊಂಡ ಮಾದಾಪುರ ಜಂಬೂರು ನಿವಾಸಿ ಅನಿಲ್ ಕುಮಾರ್ (೩೬) ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾರೆ. ಹಿಂಬದಿ ಸವಾರ ಗರಗಂದೂರು ಗ್ರಾಮದ ದಿನೇಶ್ ಎಂಬುವವರು ಗಾಯಗೊಂಡಿದ್ದು, ಇವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

 

Tags:
error: Content is protected !!