ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲಾಗಿದೆ.
ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದ್ದು, ಎರಡು ಕ್ಷೇತ್ರಗಳಿಗೂ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ನಿನ್ನೆಯೇ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿ ಭಿ ಫಾರಂ ನೀಡಲಾಗಿದ್ದು, ಇಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.





