Mysore
23
light rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಹೆಚ್ಚುವರಿಯಾಗಿ 1 ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ; ನೋಂದಣಿ ಕಡ್ಡಾಯ : ಸಚಿವ ಮುನಿಯಪ್ಪ

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಸಭೆ ನಡೆಸಿ, ರಾಜ್ಯದಲ್ಲಿ ಹೆಚ್ಚುವರಿಯಾಗಿ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ. ಆದರೆ, ಒಂದು ವಾರದೊಳಗೆ ವಾಣಿಜ್ಯ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ಗೇಲ್‌ ಕಂಪನಿಗೆ ರಿಜಿಸ್ಟರ್ ಮಾಡಿಸಬೇಕು. ಅಕ್ರಮ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

10 ಸಾವಿರ ಸಿಲಿಂಡರ್‌ನಲ್ಲಿ ವಾಣಿಜ್ಯ ಗ್ಯಾಸ್ ವ್ಯಾಪ್ತಿಗೆ ಬರುವ ಎಲ್ಲಾ ವಲಯಕ್ಕೆ ಹಂಚಿಕೆ ಆಗುತ್ತೆ. ಅದರಲ್ಲಿ ಹೋಟೆಲ್, ಇಂದಿರಾ ಕ್ಯಾಂಟೀನ್, ಪಿಜಿ ಇನ್ನಿತರ ವಲಯಕ್ಕೂ ಹಂಚಿಕೆಯಾಗಲಿದೆ. ಮುಂದಿನ ಸೋಮವಾರ ಮತ್ತೆ ಹೋಟೆಲ್ ಮಾಲೀಕರ ಜತೆ ಸಭೆ ಮಾಡಲಾಗುವುದು. ಕಳೆದ ವಾರ ಒಂದು ಸಾವಿರ ಸಿಲಿಂಡರ್ ಹೋಟೆಲ್‌ಗೆ ನೀಡಲಾಗುತ್ತಿತ್ತು. ಸದ್ಯ ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್‌ಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

 

Tags:
error: Content is protected !!