Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

ಯುದ್ಧದ ಖರ್ಚು ನಿಭಾಯಿಸಲು ಹೊಸ ದಾರಿ ಹುಡುಕಿದ ಇರಾನ್: ವ್ಯಾಪಾರಿ ಹಡಗುಗಳಿಗೆ ಶುಲ್ಕ

ಟೆಹರಾನ್:‌ ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ.

ಹಾರ್ಮುಜ್ ಜಲಸಂಧಿ ಮೂಲಕ ಹಾದುಹೋಗುವ ವ್ಯಾಪಾರಿ ಹಡಗುಗಳಿಗೆ ಇರಾನ್‌ 2 ಮಿಲಿಯನ್ ಡಾಲರ್‌ ಎಂದರೆ ಅಂದಾಜು 18.77 ಕೋಟಿ ರೂಪಾಯಿಗಳಷ್ಟು ಶುಲ್ಕ ವಿಧಿಸುತ್ತಿದೆ. ಈ ಬಗ್ಗೆ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಸಮಿತಿಯ ಸದಸ್ಯರಾದ ಅಲಾಯೆದ್ದೀನ್ ಬೊರೊಜೆರ್ಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಯುದ್ಧದ ಖರ್ಚುಗಳನ್ನು ನಿಭಾಯಿಸಲು ಈ ಮಾರ್ಗದಲ್ಲಿ ಸಂಚರಿಸುವ ವ್ಯಾಪಾರಿಗಳ ಮೇಲೆ ಶುಲ್ಕ ಹೇರಲಾಗುತ್ತಿದ್ದು ಸಂಚಾರಕ್ಕೆ ಅನುಮತಿ ಪಡೆದುಕೊಳ್ಳಲು ವ್ಯಾಪಾರಿ ಹಡಗುಗಳು ಶುಲ್ಕ ಭರಿಸಬೇಕಾಗಿದೆ.

48 ಗಂಟೆಗಳ ಒಳಗೆ ಜಲಸಂಧಿಯನ್ನು ಮತ್ತೆ ತೆರೆಯದಿದ್ದರೆ, ಅಮೆರಿಕವು ಇರಾನ್‌ನ ವಿದ್ಯುತ್ ಮೂಲಸೌಕರ್ಯವನ್ನು ನಾಶಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ಇರಾನ್ ಈ ಕ್ರಮ ಕೈಗೊಂಡಿದೆ. ಇರಾನ್ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಿದರೆ, ಜಲಸಂಧಿಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಇರಾನ್ ಕೌಂಟರ್ ಕೊಟ್ಟಿದೆ.

 

Tags:
error: Content is protected !!