Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.

ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಐದು ದಿನದ ಕದನ ವಿರಾಮ ಘೋಷಣೆ ಮಾಡಿದ್ದಕ್ಕೆ ಆಫ್ಘಾನಿಸ್ತಾನದಲ್ಲಿರುವ ಇರಾನ್‌ ರಾಯಭಾರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಖಾರವಾಗಿ ಪ್ರತಿಕ್ರಿಯೆ ನೀಡಿದೆ.

ಇರಾನ್‌ನ ಇಂಧನ ಮೂಲಸೌಕರ್ಯದ ಮೇಲೆ ಅಮೇರಿಕಾ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ. ಒಂದು ವೇಳೆ ನಮ್ಮ ಮೂಲಸೌಕರ್ಯದ ಮೇಲೆ ದಾಳಿ ಮಾಡಿದರೆ ಇಡೀ ಪ್ರದೇಶದ ಮೂಲ ಸೌಕರ್ಯದ ಮೇಲೆ ದಾಳಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದೆವು. ಈ ಎಚ್ಚರಿಕೆ ನೀಡಿದ ಬೆನ್ನಲ್ಲೇ ಟ್ರಂಪ್‌ ದಾಳಿಯಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದೆ.

Tags:
error: Content is protected !!