Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ ಹೆಚ್ಚುವರಿ ನೆರವು ನೀಡಿರುವ ಸಿಎಂ ಸಿದ್ದರಾಮಯ್ಯ ಅವರ ಭಂಡತನಕ್ಕೆ ಅವರೇ ಸಾಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್‌ ಮಾಡಿರುವ ಅವರು, ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳ ರಾಜ್ಯದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ಹೆಚ್ಚುವರಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಹ ಹೃದಯ ವೈಶಾಲ್ಯವಿರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಗುತ್ತಿತ್ತು. ಆದರೆ ಕನ್ನಡಿಗರು ನತದೃಷ್ಟರು. ಕೇರಳದವರಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ಕುಹಕವಾಡಿದ್ದಾರೆ.

2025-26ನೇ ಹಣಕಾಸು ವರ್ಷದಲ್ಲಿ ಬಜೆಟ್ ಹೊರತಾಗಿ ವೆಚ್ಚ ಮಾಡಿರುವ ಮತ್ತು ಮಾಡಲಾಗುವ 14,767 ಕೋಟಿ ರೂ. ಮೊತ್ತದ 3ನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜಿನಲ್ಲಿ ವಯನಾಡಿನ ಮುಪ್ಪಾಡಿಯಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಮತ್ತೊಮ್ಮೆ 10 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:
error: Content is protected !!