Mysore
27
overcast clouds

Social Media

ಶನಿವಾರ, 11 ಜುಲೈ 2026
Light
Dark

ಪಶು ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಸಚಿವ ಈಶ್ವರ್‌ ಖಂಡ್ರೆ ಭರವಸೆ

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಸಚಿವ ಈಶ್ವರ್‌ ಖಂಡ್ರೆ ಆಶ್ವಾಸನೆ ನೀಡಿದ್ದಾರೆ.

ಡಾ.ಸಮೀಕ್ಷಾ ರೆಡ್ಡಿ ಅವರ ನಿವಾಸಕ್ಕೆ ತೆರಳಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಇದೊಂದು ಅತ್ಯಂತ ನೋವಿನ ಸಂಗತಿ. ಸರ್ಕಾರ ಈ ನೋವಿನ ಸಂದರ್ಭದಲ್ಲಿ ಕುಟುಂಬದೊಂದಿಗೆ ನಿಲ್ಲುತ್ತದೆ. ಅವರ ಸಾವಿಗೆ ನ್ಯಾಯ ಸಿಕ್ಕೆ ಸಿಗುತ್ತದೆ ಎಂದು ಹೇಳಿದರು.

ಇನ್ನು ಮುಂದೆ ಮಹಿಳಾ ಪಶು ವೈದ್ಯರಿಗೆ ಹಾಗೂ ವೈದ್ಯರಿಗೆ ಸುರಕ್ಷತೆ ಕಲ್ಪಿಸುವುದು ಸೇರಿದಂತೆ ಕೂಡಲೇ ಸೂಕ್ತ ಎಸ್‌ಓಪಿ ರೂಪಿಸುವಂತೆ ಹಾಗೂ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

 

 

Tags:
error: Content is protected !!