Mysore
23
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

KSOU | ಬ್ಯಾಂಕ್‌ ಖಾತೆ ಹಣ ಡ್ರಾ ತಡೆಗೆ ಸರ್ಕಾರ ಆದೇಶ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದ್ದು, ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ.

ಹೀಗಾಗಿ, ತನಿಖೆ ನಡೆಯುತ್ತಿರುವ ಹಿನ್ನೆಲೆ ಹಣಕಾಸಿನ ದುರುಪಯೋಗ ತಡೆಯಲು ಮುಂದಿನ ಆದೇಶದವರೆಗೂ ಹಣ ಬಿಡುಗಡೆ ತಡೆಹಿಡಿಯುವಂತೆ ಮುಕ್ತ ವಿ.ವಿ ಬ್ಯಾಂಕ್ ಖಾತೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ, ಆಕ್ಸಿಸ್ ಬ್ಯಾಂಕ್‌ಗಳ ಶಾಖಾ ವ್ಯವಸ್ಥಾಪಕರಿಗೆ ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ (ವಿಶ್ವವಿದ್ಯಾನಿಲಯಗಳು) ಎನ್.ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

Tags:
error: Content is protected !!