Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಅಪಘಾತದಿಂದ ಹೊತ್ತಿ ಉರಿದ ಟಿಪ್ಪರ್‌, ಬಸ್‌ : 14 ಮಂದಿ ಸಜೀವ ದಹನ

ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ.

ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, 14 ಮಂದಿ ದಹನ ಜತೆಗೆ 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹರಿಕೃಷ್ಣ ಟ್ರಾವೆಲ್ಸ್ ಸೇರಿದ ಖಾಸಗಿ ಬಸ್ ಹಾಗೂ ಜಲ್ಲಿ ಕಲ್ಲು ತುಂಬುವ ಟಿಪ್ಪರ್‌ ನಡುವೆ ಮಾರ್ಕಪುರಂ ಸಮೀಪದ ರಾಯವರಂ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಪ್ಪರ್‌ನ ಅತಿ ವೇಗ ಅಥವಾ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿರುವುದು ಅಪಘಾತಕ್ಕೆ ಮುಖ್ಯ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ.

Tags:
error: Content is protected !!