Mysore
28
overcast clouds

Social Media

ಮಂಗಳವಾರ, 14 ಜುಲೈ 2026
Light
Dark

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ರಾಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನವ-ವನ್ಯಜೀವಿ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಮತ್ತು ಮಾಸಾಶನ ನೀಡಲಾಗುತ್ತಿದೆ. ಈ ಹಿಂದೆ ಇದ್ದ 15 ಲಕ್ಷ ರೂ. ಪರಿಹಾರದ ಮೊತ್ತವನ್ನು 2025ರ ಏಪ್ರಿಲ್ ನಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪರಿಹಾರದ ಜೊತೆಗೆ 5 ವರ್ಷಗಳ ಕಾಲ ಮಾಸಿಕ 4 ಸಾವಿರ ರೂ. ಮಾಸಾಶನವನ್ನು ಮೃತರ ಕುಟುಂಬದ ಸದಸ್ಯರಿಗೆ ನೀಡಲಾಗುತ್ತಿದೆ ಎಂದೂ ವಿವರಿಸಿದರು.

ಅರಣ್ಯ ಇಲಾಖೆಯಲ್ಲಿ ಕಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರು ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಹಗಲಿರುಳೆನ್ನದೆ ಕ್ಲಿಷ್ಟಕರ ಸನ್ನಿವೇಶದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯನಿರತ ಸಿಬ್ಬಂದಿ ಮೃತಪಟ್ಟಾಗ ಈ ಹಿಂದೆ 30 ಲಕ್ಷ ಅನುಗ್ರಹ ಧನ ನೀಡಲಾಗುತ್ತಿತ್ತು., ಈಗ ಆ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

ಆನೆ ಸೇರಿದಂತೆ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದರು.

 

 

Tags:
error: Content is protected !!