Mysore
24
light rain

Social Media

ಮಂಗಳವಾರ, 18 ಆಗಸ್ಟ್ 2026
Light
Dark

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಲಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶದಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ ಇಂಧನ ಮಳಿಗೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ.

ದೇಶದಲ್ಲಿ ಸಾಕಷ್ಟು ಇಂಧನ ಪೂರೈಕೆ ಇದೆ. ದೇಶದ ಎಲ್ಲಾ ಪೆಟ್ರೋಲ್‌ ಬಂಕ್‌ಗಳಲ್ಲಿ ಸಾಕಷ್ಟು ಪೆಟ್ರೋಲ್‌ ಮತ್ತು ಡೀಸೆಲ್‌ ದಾಸ್ತಾನು ಲಭ್ಯವಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ನಾಳೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ.

 

Tags:
error: Content is protected !!