Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

30 ಕೆಜಿ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ, ಇಬ್ಬರ ಬಂಧನ

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ ಜಿಲ್ಲೆಯ ಹುಣಸೂರು ತಾಲ್ಲೂಕು ಭಾಗದಲ್ಲೂ ಡ್ರಗ್ಸ್‌ ಜಾಲ ಪತ್ತೆಯಾಗಿದೆ. ಇದು ಈ ಭಾಗದಲ್ಲಿ ಡ್ರಗ್ಸ್‌ ಬೇರೂರಿರುವುದನ್ನು ಸ್ಪಷ್ಟಪಡಿಸಿದಂತಿದೆ.

ಹುಣಸೂರು ತಾಲ್ಲೂಕು ದಾನಸಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಡ್ರಗ್ಸ್‌ ಮಾರಾಟ ಜಾಲವನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮದ ಮನೆಯೊಂದರಲ್ಲಿ ಸಿಂಥೆಟಿಕ್‌ ಡ್ರಗ್ಸ್‌ ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಅರಿತ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ಕೋಟ್ಯಾಂತರ ಮೌಲ್ಯದ 30 ಕೆ.ಜಿಗಿಂತಲೂ ಹೆಚ್ಚಿನ ಸಿಂಥೆಟಿಕ್‌ ಡ್ರಗ್ಸ್‌ ಮತ್ತೆಯಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆರೋಪಿಗಳಿಬ್ಬರು ಮೈಸೂರಿನವರೇ, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:
error: Content is protected !!