Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ, ಮಾಜಿ ಗೃಹ ಸಚಿವ ಅರೆಸ್ಟ್‌

ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್‌ ಝಡ್‌ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್‌ ಲೇಖಕ್‌ ಅವರನ್ನು ಬಂಧಿಸಲಾಗಿದೆ.

ಕಳೆದ ವರ್ಷ ನಡೆದಿದ್ದ ಝೆನ್‌ ಜಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಓಲಿ ಹಾಗೂ ಲೇಖಕ್‌ ಅವರನ್ನು ಬಂಧಿಸಲಾಗಿದೆ.

ಬಾಲೇಂದ್ರ ಶಾ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಇಂದು ಬೆಳಿಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹ ಸಚಿವರನ್ನು ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್‌ ಓಂ ಅಧಿಕಾರಿ ತಿಳಿಸಿದ್ದಾರೆ.

Tags:
error: Content is protected !!