ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ.
ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಭಾರೀ ಗಾಳಿ ಜೊತೆಗೆ ಧಾರಾಕಾರವಾಗಿ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿದವು.
ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಬಿಸಿಲ ಧಗೆಗೆ ಕಂಗೆಟ್ಟಿದ್ದ ರೈತರು ಮಾತ್ರ ಮಳೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ಬೆಳೆಗೆ ನೀರು ಹಾಯಿಸಲು ಪರದಾಡುತ್ತಿದ್ದ ಬೆಳೆಗಾರರ ಮೊಗದಲ್ಲಿ ಮಳೆ ಮಂದಹಾಸ ಮೂಡಿಸಿತು.





