Mysore
29
haze

Social Media

ಸೋಮವಾರ, 20 ಏಪ್ರಿಲ 2026
Light
Dark

ವೈರಮುಡಿ ಬ್ರಹ್ಮೋತ್ಸವ

ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ ರಾಜ ಬೀದಿಯಲ್ಲಿ ಬಹಳ ವಿಜೃಂಭಣೆ ಮತ್ತು ವೈಭವದೊಂದಿಗೆ ನೆರವೇರಿತು.

ಎಲ್‌ಸಿಡಿ ಸ್ಕ್ರೀನ್ ಅಳವಡಿಕೆ: ಭಕ್ತರ ಅನುಕೂಲಕ್ಕಾಗಿ ಹಾಗೂ ದೇವಸ್ಥಾನದಲ್ಲಿ ನೂಕುನುಗ್ಗಲು ತಡೆ ಯುವ ಸಲುವಾಗಿ ಬೃಹತ್ ಎಲ್‌ಸಿಡಿ ಸ್ಕ್ರೀನ್‌ಗಳನ್ನು ದೇವಾಲಯದ ಹೊರಗೆ ಮತ್ತು ಒಳಗೆ ಅಳವಡಿಸಲಾಗಿತ್ತು.

ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ, ಶ್ರೀ ಚೆಲುವ ನಾರಾಯಣಸ್ವಾಮಿ ದೇವಾಲಯ, ಕಲ್ಯಾಣಿ, ಮಂಟಪಗಳು, ಸರ್ಕಾರಿ ಕಚೇರಿ ಕಟ್ಟಡಗಳು, ಶ್ರೀ ಯೋಗಾನರಸಿಂಹಸ್ವಾಮಿ ದೇಗುಲಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದವು.

Tags:
error: Content is protected !!