Mysore
21
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರು, ಎಲ್ಲರಿಗೂ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸ್‌ ಸೇವೆಯಲ್ಲಿ ಶಿಸ್ತು ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿದ್ದು, ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ.

ಪೊಲೀಸರು ಸರ್ಕಾರದ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕಲ್ಲದೇ, ಕಾನೂನು ಸುವ್ಯವಸ್ಥೆಯನ್ನು ಕಾಯುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಹೇಳಿದರು.

ಪೊಲೀಸರು ಮಾನವೀಯತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಜೊತೆಗೆ ಸ್ನೇಹಯಿಂದ ಇರಬೇಕು. ಅಪರಾಧಿಗಳಿಗೆ ಕರುಣೆ ತೋರಬೇಕಿಲ್ಲ. ನಿರಪರಾಧಿಗಳಿಗೆ ಕರುಣೆ ತೋರಬೇಕು ಎಂದು ಹೇಳಿದರು.

 

Tags:
error: Content is protected !!