Mysore
21
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ 132ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು.

ಲಕ್ಷಾಂತರ ಭಾರತೀಯ ಕುಟುಂಬಗಳು ಪೀಡಿತ ಪ್ರದೇಶಗಳೊಂದಿಗೆ ವಿಶೇಷವಾಗಿ ಗಲ್ಫ್‌ ದೇಶಗಳಲ್ಲಿ ನೇರವಾಗಿ ಸಂಪರ್ಕ ಹೊಂದಿವೆ. ಅಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ 10 ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರಿಗೆ ಬೆಂಬಲ ನೀಡಿದ್ದಕ್ಕಾಗಿ ಅವರು ಗಲ್ಫ್‌ ರಾಷ್ಟ್ರಗಳಿಗೆ ಕೃತಜ್ಞತೆ ಸಲ್ಲಿಸಿದರು.

ಜಾಗತಿಕ ಇಂಧನ ಪೂರೈಕೆಯ ಮೇಲೆ ಸಂಘರ್ಷದ ಪರಿಣಾಮವನ್ನು ತಿಳಿಸಿದ ಮೋದಿ ಅವರು, ಈ ಪ್ರದೇಶವು ಭಾರತದ ಇಂಧನ ಅಗತ್ಯಗಳನ್ನು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಯುದ್ಧ ನಡೆಯುತ್ತಿರುವ ಪ್ರದೇಶವು ನಮ್ಮ ಇಂಧನ ಅಗತ್ಯಗಳ ಪ್ರಮುಖ ಕೇಂದ್ರವಾಗಿದೆ. ಇದರಿಂದಾಗಿ ಪೆಟ್ರೋಲ್‌, ಡೀಸೆಲ್‌ ಬಿಕ್ಕಟ್ಟು ವಿಶ್ವದಾದ್ಯಂತ ಬೆಳೆಯುತ್ತಿದೆ ಎಂದು ಹೇಳಿದರು.

 

Tags:
error: Content is protected !!