Mysore
23
broken clouds

Social Media

ಗುರುವಾರ, 23 ಏಪ್ರಿಲ 2026
Light
Dark

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ ಕುಳ್ಳುಮಾರಮ್ಮ ಹಾಗೂ ಶ್ರೀ ಬಸವೇಶ್ವರ ಸ್ವಾಮಿಯ ಮಹಾ ಕೊಂಡೋತ್ಸವ ಅದ್ದೂರಿಯಾಗಿ ನಡೆಯಿತು.

ಪೊನ್ನಾಚಿ ಆಲಂಬಾಡಿ ಮಠದ ಹಿರಿಯ ಶ್ರೀ ವೀರಪ್ಪ ಸ್ವಾಮಿಗಳು ಹಾಗೂ ಕಿರಿಯ ಶ್ರೀ ಮಹಾಂತೇಶ್ ಸ್ವಾಮೀಜಿ ಅವರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.

ಹಾಲರವಿ ಸೇವೆ, ಶ್ರೀ ಬಸವೇಶ್ವರ ಸ್ವಾಮಿ ಕೊಂಡೋತ್ಸವ ಹಾಗೂ ಜಾಗರ ಸೇವೆಗಳು ಸಂಪ್ರದಾಯಬದ್ಧವಾಗಿ ಮತ್ತು ಅಚ್ಚುಕಟ್ಟಾಗಿ ನಡೆಯಿತು.

ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಅಧಿಕಾರಿಗಳ ಬಂದೋಬಸ್ತಿನಲ್ಲಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಿತು. ಮಹಾಕೊಂಡೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಹಬ್ಬದ ವೈಭವವನ್ನು ಮತ್ತಷ್ಟು ಹೆಚ್ಚಿಸಿದರು.

ಭಕ್ತರು ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಕುಳ್ಳುಮಾರಮ್ಮ, ರಂಗಪ್ಪ ಸ್ವಾಮಿ, ಸಿದ್ದಪ್ಪಾಜಿ ಸ್ವಾಮಿ ಹಾಗೂ ಶ್ರೀ ರಾಮದೇವರ ದರ್ಶನ ಪಡೆದು ಪುನೀತರಾದರು. ಭಕ್ತಿಭಾವ, ಶ್ರದ್ಧೆ ಮತ್ತು ಸಂಪ್ರದಾಯದೊಂದಿಗೆ ನಡೆದ ಈ ಜಾತ್ರೆ ಮಹೋತ್ಸವ ಗ್ರಾಮದಲ್ಲಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿತು.

Tags:
error: Content is protected !!