Mysore
22
broken clouds

Social Media

ಮಂಗಳವಾರ, 07 ಜುಲೈ 2026
Light
Dark

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಂದಾಯಿತ ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಮಾಡಲಾಗುತ್ತಿದೆ. ಪ್ರತಿದಿನ 3 ಸಾವಿರ ಸಿಲಿಂಡರ್ ಬಳಕೆ ಮಾಡಲಾಗುತ್ತಿದೆ. ಅಷ್ಟೂ ಸಿಲಿಂಡರ್‌ಗಳನ್ನು ಒದಗಿಸಲಾಗುತ್ತಿದೆ. ಹೀಗಾಗಿ ಆಟೋ ರಿಕ್ಷಾದವರು ವಿನಾಕಾರಣ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದರು.

ಎಚ್‌ಪಿಸಿಎಲ್, ಬಿಪಿಸಿಎಲ್, ಐಪಿಸಿಎಲ್ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಆದರೆ ಖಾಸಗಿ ಅನಿಲ ಪೂರೈಕೆ ಏಜೆನ್ಸಿಗಳು ದರವನ್ನು ಹೆಚ್ಚಿಸಿರುವುದರಿಂದ ಗೊಂದಲ ಉಂಟಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಖಾಸಗಿ ಏಜೆನ್ಸಿಗಳು ದರ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ ಎಂದರು.

ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರದಲ್ಲೆ ಅನಿಲ ಹಾಗೂ ತೈಲವನ್ನು ನೀಡಬೇಕು ಎಂದ ಅವರು, ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೆಲವೊಂದು ವ್ಯತ್ಯಯಗಳಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕೋರಿದರು.

Tags:
error: Content is protected !!