Mysore
21
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

dk shivakumar international trip

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಯವರ ಪ್ರಶ್ನೆಗೆ ನಾನು ಉತ್ತರ ನೀಡಲ್ಲ. ನಮ್ಮಿಬ್ಬರ ಮಾತು ಬಿಟ್ಟು ಬೇರೆಯವರ ಮಾತು ಗೌಣ. ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ ಎಂದು ಹೇಳಿದರು.

ಉಪಚುನಾವಣೆ ಸಂಬಂಧ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ನಮ್ಮ ಕಾರ್ಯಕ್ರಮಗಳಿಂದ ಜನ ಖುಷಿಯಾಗಿದ್ದಾರೆ. ಹೀಗಾಗಿ ಎರಡೂ ಕ್ಷೇತ್ರಗಳಲ್ಲೂ ನಮ್ಮ ಗೆಲುವು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

Tags:
error: Content is protected !!