Mysore
35
few clouds

Social Media

ಬುಧವಾರ, 22 ಏಪ್ರಿಲ 2026
Light
Dark

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್‌ ಟ್ರೋಂಗ್ಲಾಬಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಕಿ ಉಗ್ರಗಾಮಿಗಳಿಂದ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು, ಜನರು ಭಯಭೀತರಾಗಿದ್ದಾರೆ.

ಪರಿಸ್ಥಿತಿಯನ್ನು ಹತೋಟಿಗೆ ತರಲು ಬಿಷ್ಣುಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಷ್ಣುಪುರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

Tags:
error: Content is protected !!