Mysore
24
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು 

ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ ಪಡುಗೂರು ಗ್ರಾಮದಲ್ಲಿ ನಡೆದಿದೆ.

ಪಡುಗೂರು ಗ್ರಾಮದ ರೈತ ಮಹದೇವಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಯಾಗಿದ್ದು, ಸೆರೆ ಸಿಕ್ಕ ಚಿರತೆ ನಾಲ್ಕು ವರ್ಷ ಪ್ರಾಯದ ಹೆಣ್ಣು ಚಿರತೆಯಾಗಿದೆ

ಕಳೆದ ಹಲವು ದಿನಗಳಿಂದ ಪಡುಗೂರು ಸುತ್ತಮುತ್ತಲಿನ ಸ್ಥಳಗಳಲ್ಲಿ ಹುಲಿ‌ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೀಡಾಗಿದ್ದರು.

ಸ್ಥಳೀಯರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು, ತುಮಕೂರು ಮಾದರಿಯಲ್ಲಿ ಬೋನಿಟ್ಟು ಕರುವೂಂದನ್ನು ಕಟ್ಟಿಹಾಕಿತ್ತು. ಆಹಾರ ಅರಸಿ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ಸದ್ಯ ಸೆರೆ ಸಿಕ್ಕ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ಬಿಡಲಾಗಿದೆ. ಆದರೆ ಗ್ರಾಮಸ್ಥರಲ್ಲಿ ಇನ್ನೂ ಹುಲಿ ಅತಂಕ ಇದ್ದು, ಅರಣ್ಯ ಇಲಾಖೆಯು ಕೂಡಲೇ ಹುಲಿ ಸೆರೆಗೆ ಕ್ರಮವಹಿಸಬೇಕೆಂದು ರೈತ ಮುಖಂಡರು ಹಾಗೂ ಪಡಗೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

 

Tags:
error: Content is protected !!