Mysore
25
clear sky

Social Media

ಶನಿವಾರ, 18 ಏಪ್ರಿಲ 2026
Light
Dark

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಸವೇಶ್ವರ ನಗರ ಠಾಣೆ ಪೊಲೀಸರು ನಾಗರಾಜ್‌ ಅವರನ್ನು ಬಂಧಿಸಿದ್ದಾರೆ. ಕಳೆದ 2021ರಲ್ಲಿ ವಾಟಾಳ್‌ ನಾಗರಾಜ್‌ ಅವರು ಶಾಸಕ ಸುರೇಶ್‌ ಕುಮಾರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಾಟಾಳ್‌ ನಾಗರಾಜ್‌ ವಿರುದ್ಧ ಅರೆಸ್ಟ್‌ ವಾರೆಂಟ್‌ ಜಾರಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Tags:
error: Content is protected !!