Mysore
24
broken clouds

Social Media

ಸೋಮವಾರ, 13 ಏಪ್ರಿಲ 2026
Light
Dark

ರಾಜ್ಯಸಭೆ ಸದಸ್ಯರಾಗಿ ನಾಳೆ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ರಾಧಾಕೃಷ್ಣನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧನ ಮಾಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಧಿಕಾರ ಪರಿವರ್ತನೆಗೆ ನಾಂದಿ ಹಾಡಲಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ನಂತರ ನಿತೀಶ್ ಕುಮಾರ್ ಅದೇ ದಿನ ಪಾಟ್ನಾಗೆ ಹಿಂತಿರುಗಲಿದ್ದಾರೆ. ಮುಂದಿನ ಉತ್ತರಾಧಿಕಾರಿಯನ್ನು ಚರ್ಚಿಸಲು ಏಪ್ರಿಲ್.13ರಿಂದ ಬಿಹಾರ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಗಳು ಮರುದಿನ (ಏಪ್ರಿಲ್ 14) ರಾಜೀನಾಮೆ ನೀಡುವ ಸಾಧ್ಯತೆಯಿದೆ. ಅದೇ ದಿನ, ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲು ಎಲ್ಲಾ ಮೈತ್ರಿಕೂಟದ ಪಾಲುದಾರರ ಹಾಗೂ ಎನ್ ಡಿಎ ಶಾಸಕಾಂಗ ಪಕ್ಷದ ಸಭೆಗಳು ನಡೆಯುವ ಸಾಧ್ಯತೆಯಿದೆ.

ಏಪ್ರಿಲ್ 15 ರಂದು ಬಿಹಾರದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದೆ.

ಹಾಲಿ ಉಪ ಮುಖ್ಯಮಂತ್ರಿ ಸಮರ್ಥ ಚೌಧರಿ ಅವರು ಬಿಹಾರದ ನೂತನ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ವದಂತಿ ಹಬ್ಬಿದೆ. ಕಳೆದ ತಿಂಗಳು ಜೆಡಿ(ಯು) ಸೇರಿದ ಕುಮಾರ್ ಅವರ ಪುತ್ರ ನಿಶಾಂತ್ ಅವರನ್ನು ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಕೇಳಿ ಬಂದಿವೆ.

Tags:
error: Content is protected !!