Mysore
23
overcast clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹಲ್ದಿಯಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದಲ್ಲಿ 7ನೇ ವೇತನ ಆಯೋಗ ಜಾರಿ ಮಾಡುತ್ತೇವೆ. ಮಹಿಳೆಯರಿಗೆ ಸುರಕ್ಷತೆ ನ್ಯಾಯ ದೊರಕಿಸಿಕೊಡುತ್ತೇವೆ. ಭ್ರಷ್ಟಾಚಾರದ ವಿರುದ್ಧ ಕಾನೂನು ಸಮರ ಮಾಡುತ್ತೇವೆ. ಅಕ್ರಮ ವಲಸಿಗರನ್ನು ಹೊರಗೆ ಕಳುಹಿಸುವ ಕೆಲಸ ಮಾಡುತ್ತೇವೆ. ಜೊತೆಗೆ ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿರುತ್ತದೆ ಎಂದು ಹೇಳಿದರು.

ಟಿಎಂಸಿಯ ಭ್ರಷ್ಟಾಚಾರ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳ ಎಲ್ಲಾ ಪೈಲ್‌ಗಳನ್ನು ಬಿಜೆಪಿ ಮತ್ತೆ ತೆರೆಯುತ್ತದೆ. ಅಕ್ರಮದಲ್ಲಿ ತೊಡಗಿರುವ ಎಲ್ಲಾ ನಾಯಕರನ್ನು ಜೈಲಿಗೆ ಹಾಕಲಾಗುವುದು ಎಂದು ತಿಳಿಸಿದರು.

 

Tags:
error: Content is protected !!