Mysore
21
broken clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.

ಕಾಫಿ ತೋಟದಲ್ಲಿ ಬಾಳೆ ಹಾಳೆಯ ಮೇಲೆ ನವಜಾತ ಶಿಶುವನ್ನು ಮಲಗಿಸಿ ಹೋಗಿದ್ದಾರೆ. ಇದನ್ನು ಕಂಡ ಸ್ಥಳೀಯರು ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಗುವನ್ನು ರಕ್ಷಣೆ ಮಾಡಿ ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಕರೆದೊಯ್ದು ಆರೈಕೆ ಮಾಡುತ್ತಿದ್ದಾರೆ.

ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!