Mysore
26
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.

ಇದರಿಂದ ಗರ್ಭಕೋಶದ ಸೋಂಕು ಅದರ ದೇಹಕ್ಕೆ ವ್ಯಾಪಿಸಿ ಬಹು ಅಂಗಾಂಗ ವೈಫಲ್ಯವಾಗಿರುವ ಶಂಕೆ ವ್ಯಕ್ತವಾಗಿದೆ.

ನೀರಾನೆಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಬನ್ನೇರುಘಟ್ಟ ಮತ್ತು ಮೈಸೂರಿನಿಂದ ಆಗಮಿಸಿದ್ದ ತಜ್ಞ ವೈದ್ಯರು 2 ದಿನ ತಪಾಸಣೆ ನಡೆಸಿದ್ದಾರೆ. ಸ್ಯಾಂಪಲ್‌ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ನೀರಾನೆ ಬಹು ಅಂಗಾಂಗ ಸೋಂಕಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಕೂಡ ಆರಂಭಿಸಲಾಗಿದೆ.

 

Tags:
error: Content is protected !!