Mysore
32
overcast clouds

Social Media

ಭಾನುವಾರ, 03 ಮೇ 2026
Light
Dark

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ ಮುರಿದಿದ್ದು, ಬೇರೆ ಕೊಂಬೆಗಳ ನಡುವೆ ಸಿಲುಕಿ ನೇತಾಡುತ್ತಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಜನರು ಓಡಾಡುತ್ತಿದ್ದು, ಗಾಳಿಯ ರಭಸಕ್ಕೆ ಮರದ ಕೊಂಬೆ ಕೆಳಗೆ ಬಿದ್ದರೆ ಅನಾಹುತವಾಗುತ್ತದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಒಣಗಿರುವ ಮರದ ಕೊಂಬೆಯನ್ನು ತೆರವುಗೊಳಿಸುವ ಮೂಲಕ ಅನಾಹುತವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

Tags:
error: Content is protected !!