Mysore
21
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ.

ನಜೀರ್‌ ಅಹಮ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ.

ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸೋಮವಾರ ಸಂಜೆಯೊಳಗೆ ಸಿಎಂ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಡೆಡ್‌ಲೈನ್‌ ನೀಡಿದ್ದರು.

ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಕಡೆ ಗಳಿಗೆಯಲ್ಲಿ ನಜೀರ್‌ ಅಹಮ್ಮದ್‌ ರಾಜೀನಾಮೆ ಪತ್ರ ರವಾನಿಸಿದ್ದಾರೆ.

Tags:
error: Content is protected !!