Mysore
36
few clouds

Social Media

ಮಂಗಳವಾರ, 14 ಏಪ್ರಿಲ 2026
Light
Dark

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ರಾಧಾಕೃಷ್ಣನ್‌, ಪ್ರಧಾನಿ ನರೇಂದ್ರ ಮೋದಿ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಗಣ್ಯಾತಿಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಗುಜರಾತ್‌ನ ಗಾಂಧಿನಗರದ ಲೋಕಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರು ಉಪರಾಷ್ಟ್ರಪತಿ ಭವನದಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಅಂಬೇಡ್ಕರ್‌ ಜನ್ಮದಿನವಾದ ಇಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರಾಷ್ಟ್ರ ನಿರ್ಮಾಣದತ್ತ ಅಂಬೇಡ್ಕರ್‌ ಪ್ರಯತ್ನಗಳು ಬಹಳ ಪ್ರೇರಣಾದಾಯಕವಾಗಿವೆ. ಅವರ ಜೀವನ ಮತ್ತು ಕೆಲಸವು ಪೀಳಿಗೆಗೆ ನ್ಯಾಯಯುತ ಮತ್ತು ಪಗ್ರತಿಪರ ಸಮಾಜವನ್ನು ನಿರ್ಮಿಸಲು ಸ್ಫೂರ್ತಿ ನೀಡುತ್ತಲೇ ಇದೆ. ಇಡೀ ಜಗತ್ತು ಒಂದೇ ಕುಟುಂಬ ಎಂದು ಪ್ರಧಾನಿ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪೋಸ್ಟ್‌ ಮಾಡಿದ್ದು, ಅಂಬೇಡ್ಕರ್‌ ಅವರು ಎಲ್ಲಾ ವರ್ಗಗಳಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡುವ ಸಂವಿಧಾನವನ್ನು ನೀಡುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಬಲವಾದ ಅಡಿಪಾಯಗಳನ್ನು ಹಾಕಿದರು. ದೇಶದ ಸಮಗ್ರತೆಯ ದೃಷ್ಟಿಯಿಂದ 370ನೇ ವಿಧಿಯನ್ನು ತೀವ್ರವಾಗಿ ವಿರೋಧಿಸಿದರು. ಜನ್ಮದಿನದಂದು ಅವರಿಗೆ ನಮನಗಳು ಎಂದು ಪೋಸ್ಟ್‌ ಮಾಡಿದ್ದಾರೆ.

ಇನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಅಂಬೇಡ್ಕರ್‌ ಅವರು ನಮಗೆ ಸಂವಿಧಾನ ನೀಡಿದ್ದು ಮಾತ್ರವಲ್ಲ, ನ್ಯಾಯ, ಸಮಾನತೆ ಮತ್ತು ಘನತೆಯ ಮೇಲೆ ಸ್ಥಾಪಿತವಾದ ಬಲಿಷ್ಠ ಭಾರತದ ಕನಸನ್ನು ನೀಡಿದರು. ಈ ದೇಶವ್ನು ಬಾಬಾಸಾಹೇಬ್‌ ಅವರ ಆದರ್ಶಗಳ ಮೇಲೆ ನಿರ್ಮಿಸಲಾಗಿದೆ. ಅವುಗಳನ್ನು ರಕ್ಷಿಸಲು ನಾನು ನನ್ನ ಕೊನೆಯ ಉಸಿರಿನವರೆಗೂ ನನ್ನ ಸಂಪೂರ್ಣ ಶಕ್ತಿಯಿಂದ ಹೋರಾಡುತ್ತೇನೆ ಎಂದು ಅಂಬೇಡ್ಕರ್‌ ಜಯಂತಿಯ ಶುಭಾಶಯ ಕೋರಿದ್ದಾರೆ.

Tags:
error: Content is protected !!