Mysore
24
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ವಿಕ್ಷಣೆಗೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಟರ್ಮಿನಲ್‌ ನಿಲ್ದಾಣಗಳಿಂದ ಕೊನೆಯ ಮೆಟ್ರೊ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.

ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬಿಎಂಆರ್‌ಸಿಎಲ್‌ ಏ.15 ಮತ್ತು 24ರ ರಾತ್ರಿ ಮೆಟ್ರೋ ರೈಲಿನ ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಈ ದಿನಗಳಲ್ಲಿ ಎಲ್ಲಾ ಟರ್ಮಿನಲ್‌ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಐಪಿಎಲ್‌ ಟಿಕೆಟ್‌ ಇರುವವರು ಅಂದು ನಮ್ಮ ಮೆಟ್ರೊದಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

Tags:
error: Content is protected !!