Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.

ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌ ಅತಾ ಹಸ್ನೈನ್‌ ಅವರು ಸಾಮ್ರಾಟ್‌ ಚೌಧರಿಯವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿಗಳಾಗಿ ಜೆಡಿಯು ನಾಯಕರಾದ ವಿಜಯ್‌ ಚೌಧರಿ ಮತ್ತು ಬಿಜೇಂದ್ರ ಯಾದವ್‌ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ಅವರು ರಾಜೀನಾಮೆ ನೀಡಿದ್ದರು.

ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸಿದ ನತರ ಅವರು ನಿನ್ನೆ(ಏಪ್ರಿಲ್.‌14, 2026) ಮಧ್ಯಾಹ್ನ ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು.

 

Tags:
error: Content is protected !!