Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಕಲಬುರ್ಗಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ತಾಪಮಾನ ತೀವ್ರ ಏರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಕಲಬುರ್ಗಿ ತಾಲ್ಲೂಕಿನ ಔರಾದ್‌ನಲ್ಲೇ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಚಿಂಚೋಳಿ ಹಾಗೂ ಅಫಜಲಪುರ ತಾಲ್ಲೂಕುಗಳಲ್ಲಿ ತಲಾ 44.03 ಡಿಗ್ರಿ ಸೆಲ್ಸಿಯಸ್‌, ಆಳಂದ ತಾಲ್ಲೂಕಿನಲ್ಲಿ 44.01 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಉಷ್ಣಾಂಶದ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ಆರೋಗ್ಯ ಇಲಾಖೆ ಕೂಡ ಜನತೆಗೆ ಸೂಚನೆ ನೀಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಧ್ಯಾಹ್ನ 12 ಗಂಟೆಯಿಂದ ಸಂಜೆವರೆಗೆ ಅನಾವಶ್ಯಕವಾಗಿ ಹೊರಗೆ ಬರದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚನೆ ನೀಡಿದೆ.

 

 

Tags:
error: Content is protected !!