Mysore
35
few clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಓದುಗರ ಪತ್ರ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು ಸೂಕ್ತವಾಗಿ ವಿಲೇವಾರಿ ಮಾಡದೇ ಮರ-ಗಿಡಗಳ ಬುಡಗಳಲ್ಲಿ ಎಸೆಯುತ್ತಿರುವುದರಿಂದ ಅಲ್ಲಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಗಂಗೋತ್ರಿ ಆವರಣ ಕಸದ ತಿಪ್ಪೆಯಾಗಿ ಮಾರ್ಪಾಡಾಗಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದೆ.

ವಿದ್ಯಾರ್ಥಿಗಳ ಆರೋಗ್ಯ ಹದಗೆಟ್ಟರೆ ಯಾರು ಹೊಣೆ ಎಂಬಂತಾಗಿದೆ. ಕೂಡಲೇ ಮೈಸೂರು ವಿಶ್ವವಿದ್ಯಾನಿಲಯದ ಸಂಬಂಧಪಟ್ಟ ಅಧಿಕಾರಿಗಳು ಗಂಗೋತ್ರಿ ಆವರಣದಲ್ಲಿ ಕಸ ವಿಲೇವಾರಿ ಮಾಡಿಸಬೇಕು ಹಾಗೂ ಎಲ್ಲೆಂದರಲ್ಲಿ ಕಸವನ್ನು ಎಸೆಯುವ ಹೋಟೆಲ್ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ನೈರ್ಮಲ್ಯ ಕಾಪಾಡಲು ಮುಂದಾಗಬೇಕಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!