Mysore
23
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲು

mahesh timarotti

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬುರುಡೆ ಗ್ಯಾಂಗ್‌ ಹೆಸರಿನ ಯಕ್ಷಗಾನ ಪ್ರಸಂಗಕ್ಕೆ ಸಂಬಂಧಿಸಿದಂತೆ ತಮ್ಮ ಹೋರಾಟವನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಮಹೇಶ್‌ ಶೆಟ್ಟಿ ತಿಮರೋಡಿ ಯಕ್ಷಗಾನ ಕಲಾವಿದರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ತೂರು ಮಹಿಳಾ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಕಲಾವಿದ ಸುಂದರ ರೈ ನೀಡಿದ ದೂರಿನಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

 

Tags:
error: Content is protected !!