Mysore
34
overcast clouds

Social Media

ಬುಧವಾರ, 06 ಮೇ 2026
Light
Dark

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.

ಕುರ್ಣೇಗಾಲದ ಜವರಪ್ಪ ಕೊಲೆಯಾದ ದುರ್ದೈವಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ(26) ಬಂಧಿತ ಆರೋಪಿಗಳು.

ಮೊನ್ನೆ ಕುರ್ಣೇಗಾಲ ಗ್ರಾಮದ ರಸ್ತೆ ಬದಿಯಲ್ಲಿ ಜವರಪ್ಪನ ಶವ ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದರಿಂದ ತನಿಖೆ ನಡೆಸುವಂತೆ ದೂರು ದಾಖಲಾಗಿತ್ತು.

ದೂರು ದಾಖಲಾದ 24 ಗಂಟೆಯೊಳಗೆ ಸರಗೂರು ಠಾಣೆ ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತನಿಖೆ ವೇಳೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಪತಿ ಜವರಪ್ಪನನ್ನು ಪತ್ನಿ ಅಮೃತಾಳೇ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

Tags:
error: Content is protected !!