ಮಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೋರ್ಟ್‌ನಿಂದ ಅಧಿಕೃತ ಮಾಹಿತಿ ಬಂದ ಬಳಿಕ ವಿನಯ್ ಕುಲಕರ್ಣಿಯ ಶಾಸಕ ಸ್ಥಾನ ರದ್ದು ಕುರಿತು ತೀರ್ಮಾನ ಮಾಡಲಾಗುತ್ತದೆ. ಒಂದು ವೇಳೆ ತಡೆಯಾಜ್ಞೆಯಾದರೆ ಮುಂದುವರಿಯುವ ಅವಕಾಶವಿರುತ್ತದೆ ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಅವರು, ಸಂಪುಟ ಪುನರ್‌ರಚನೆ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ಮಾಹಿತಿ ಇಲಲ್. ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿರುವುದು ಗೊತ್ತಿಲ್ಲ. ಮುಸ್ಲಿಂ ಸಮುದಾಯ ನಿರ್ಲಕ್ಷ್ಯದ ಬಗ್ಗೆ ಪಕ್ಷದ ನಾಯಕರು ಮಾತನಾಡುತ್ತಾರೆ ಎಂದು ಹೇಳಿದರು.





