Mysore
24
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್‌ ಘೋಷಣೆ ಮಾಡಿದೆ.

ವಿಶೇಷವಾಗಿ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಮಾಣಿಕ್ಯಾಧಾರಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದೆ.

ದತ್ತಪೀಠ, ಮಾಣಿಕ್ಯಾಧಾರ ತಪ್ಪಲು ಪ್ರದೇಶದಲ್ಲಿ ಪಿಎಸ್‌ಐ ನೇತೃತ್ವದಲ್ಲಿ ನಾಲ್ವರು ಪೊಲೀಸರನ್ನು ಶಾಶ್ವತವಾಗಿ ನಿಯೋಜಿಸಲಾಗಿದೆ.

ಪ್ರತಿ ಠಾಣೆಯಿಂದ ಕೆಲ ಸಿಬ್ಬಂದಿಯನ್ನು ವಾರಪೂರ್ತಿ ಅಲ್ಲಿಯೇ ಮೊಕ್ಕಾಂ ಹಾಕುವಂತೆ ಸೂಚನೆ ನೀಡಲಾಗಿದ್ದು, ಪ್ರವಾಸಿಗರಿಗೆ 24 ಗಂಟೆಗಳ ಭದ್ರತೆ ಒದಗಿಸಲಾಗಿದೆ.

Tags:
error: Content is protected !!