Mysore
29
scattered clouds

Social Media

ಮಂಗಳವಾರ, 19 ಮೇ 2026
Light
Dark

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್‌ ಅವರು, ತಾಪಮಾನದ ವೈಪರೀತ್ಯದಿಂದಾಗಿ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಟಿದೆ. ತಾಪಮಾನದಿಂದ ರಾತ್ರಿ ಹಾಗೂ ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತದೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ. ಡ್ಯಾಂಗಳ ನೀರು ಆವಿಯಾಗುತ್ತಿದ್ದು, ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆಯಿದೆ. ಇದರಿಂದ ಪ್ರಾಣಿ, ಪಕ್ಷಿ ಹಾಗೂ ಮನುಷ್ಯರಿಗೂ ನೀರಿನ ಅಭಾವ ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

 

Tags:
error: Content is protected !!