Mysore
35
few clouds

Social Media

ಬುಧವಾರ, 22 ಏಪ್ರಿಲ 2026
Light
Dark

ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ: ಎನ್‌ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್‌ ಪವಾರ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶರದ್‌ ಪವಾರ್‌ ಅವರಿಗೆ ನಿಯಮಿತ ಆರೋಗ್ಯ ತಪಾಸಣೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಯಲ್ಲಿದ್ದಾರೆ. ಗಂಭೀರವಾರ ಆರೋಗ್ಯ ಸಮಸ್ಯೆಯೇನೂ ಇಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಶರದ್‌ ಪವಾರ್‌ ಅವರು ಇತ್ತೀಚೆಗಷ್ಟೇ ವ್ಹೀಲ್‌ಚೇರ್‌ನಲ್ಲಿಯೇ ಕುಳಿತು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಕಳೆದ ಫೆಬ್ರವರಿಯಲ್ಲಿ ನಿರ್ಜಲೀಕರಣ ಸಮಸ್ಯೆಯಿಂದಾಗಿ ಪುಣೆಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.

Tags:
error: Content is protected !!