Mysore
23
broken clouds

Social Media

ಗುರುವಾರ, 30 ಏಪ್ರಿಲ 2026
Light
Dark

ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು

ಪಾಲ್ಘಾರ್:‌ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ ನಡೆದಿದೆ.

ಇಲ್ಲಿನ ಕೊನ್ಸಾಯಿ ಗ್ರಾಮದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಈ ದುರಂತ ಸಂಭವಿಸಿದೆ. ಕಾರ್ಖಾನೆಯಲ್ಲಿ 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಮಿಕಲ್‌ ಮಿಕ್ಸಿಂಗ್‌ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

 

 

Tags:
error: Content is protected !!